Psalms 90:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
Kannada BSI Bible 2016
ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಮ್ಮನ್ನು ಕುಗ್ಗಿಸಿದ ದಿವಸಗಳಿಗೂ ನಾವು ಕೇಡನ್ನು ಅನುಭವಿಸಿದ ವರುಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
Kannada Bible (KNCL) BSI 2016
ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ I ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ. ನಾವು ತೊಂದರೆಯನ್ನು ನೋಡಿದಷ್ಟು ವರ್ಷಗಳು ನಮ್ಮನ್ನು ಸಂತೋಷಪಡಿಸಿರಿ.