Psalms 90:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
Kannada BSI Bible 2016
ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಮನುಷ್ಯರನ್ನು ಪ್ರವಾಹದಿಂದ ಬಡುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
Kannada Bible (KNCL) BSI 2016
ಮನುಜರು ನೀ ಹರಿದೋಡಿಸುವ ಹೊಯಿಲು I ಇರುಳಿನ ಕನಸು, ಹಗಲಿನ ಗರಿಹುಲ್ಲು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ. ಅವರು ಬೆಳಿಗ್ಗೆ ಬೆಳೆಯುವ ಹುಲ್ಲಿನ ಹಾಗೆ ಇದ್ದಾರೆ.