Psalms 92:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವೈರಿಗಳು ನನ್ನ ಸುತ್ತಲೂ ಸೇರಿಬಂದಿದ್ದಾರೆ. ಅವರು ಆಕ್ರಮಣಕ್ಕೆ ಸಿದ್ಧವಾಗಿರುವ ಬಲಿಷ್ಠವಾದ ಹೋರಿಗಳಂತಿದ್ದಾರೆ. ಅವರು ನನ್ನ ಬಗ್ಗೆ ಹೇಳುತ್ತಿರುವುದೂ ನನಗೆ ಕೇಳುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
Kannada BSI Bible 2016
ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರೋಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
Kannada Bible (KNCL) BSI 2016
ನಾ ಕಣ್ಣಾರೆ ಕಂಡಿರುವೆ ಶತ್ರುಗಳಿಗಾದ ದುರ್ಗತಿಯನು I ಕಿವಿಯಾರೆ ಕೇಳಿರುವೆ ನನ್ನ ವಿರೋಧಿಗಳಿಗಾದ ವಿಪತ್ತನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು. ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳ ವಿಪತ್ತನ್ನು ಕುರಿತು ನಾನು ಕೇಳಿಸಿಕೊಳ್ಳುವೆ.