Psalms 93:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
Kannada BSI Bible 2016
ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.
Kannada Bible (KNCL) BSI 2016
ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.