Psalms 95:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು ” ಎಂದು ಹೇಳಿದೆನು.
Kannada BSI Bible 2016
ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.
Kannada Bible (KNCL) BSI 2016
ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.