Psalms 95:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
Kannada BSI Bible 2016
ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
Kannada Bible (KNCL) BSI 2016
ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಮೆರೀಬದಲ್ಲಿ ಮಾಡಿದಂತೆ, ಹೌದು, ಅಂದು ನೀವು ಮರುಭೂಮಿಯ ಮಸ್ಸಾ ಎಂಬ ಸ್ಥಳದಲ್ಲಿ ಮಾಡಿದಂತೆ, ನಿಮ್ಮ ಹೃದಯವನ್ನು ಕಠಿಣಪಡಿಸಬೇಡಿರಿ.