Psalms 98:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಕಡೆಗಿದ್ದ ಆತನ ಪ್ರೀತಿ ಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
Kannada BSI Bible 2016
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.
Kannada Bible (KNCL) BSI 2016
ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.