Psalms 99:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.
Kannada BSI Bible 2016
ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಯೆಹೋವದೇವರೇ, ಅವರಿಗೆ ಉತ್ತರಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ ಕ್ಷವಿುಸುವ ದೇವರಾಗಿದ್ದಿ.
Kannada Bible (KNCL) BSI 2016
ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ.