Revelation 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.
Kannada BSI Bible 2016
ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.
Kannada Bible (KNCL) BSI 2016
ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.