Revelation 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
Kannada BSI Bible 2016
ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
Kannada Bible (KNCL) BSI 2016
ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು.