Revelation 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.
Kannada BSI Bible 2016
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.
Kannada Bible (KNCL) BSI 2016
ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.