Revelation 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನು ತಾನು ಕಂಡದ್ದೆಲ್ಲವನ್ನು ತಿಳಿಸಿದನು. ಇದು ಯೇಸು ಕ್ರಿಸ್ತನು ಅವನಿಗೆ ಹೇಳಿದ ಸತ್ಯ. ಇದು ದೇವರಿಂದ ಬಂದ ಸಂದೇಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.
Kannada BSI Bible 2016
ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನು ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ಸಾಕ್ಷಿಕೊಟ್ಟನು.
Kannada Bible (KNCL) BSI 2016
ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು.