Revelation 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.
Kannada BSI Bible 2016
ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ.
Kannada Bible (KNCL) BSI 2016
ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ.