Revelation 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ
Kannada BSI Bible 2016
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ
Kannada Bible (KNCL) BSI 2016
ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,