Revelation 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.
Kannada BSI Bible 2016
ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.
Kannada Bible (KNCL) BSI 2016
ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.