Revelation 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI Bible 2016
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada Bible (KNCL) BSI 2016
“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.