Revelation 10:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.
Kannada BSI Bible 2016
ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು; ಅವನ ತಲೆಯ ಮೇಲೆ ಮುಗಿಲುಬಿಲ್ಲು ಇತ್ತು; ಅವನ ಮುಖವು ಸೂರ್ಯನೋಪಾದಿಯಲ್ಲಿತ್ತು;
Kannada Bible (KNCL) BSI 2016
ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.