Revelation 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.
Kannada BSI Bible 2016
ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.
Kannada Bible (KNCL) BSI 2016
ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.