Revelation 10:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಈ ಯೋಜನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
Kannada BSI Bible 2016
ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.
Kannada Bible (KNCL) BSI 2016
ಏಳನೆಯ ದೇವದೂತನು ತುತೂರಿಯನ್ನು ಊದುವನು. ಆಗ ದೇವರು ಇದುವರೆಗೆ ನಿಗೂಢವಾಗಿಟ್ಟಿದ್ದ ತಮ್ಮ ಯೋಜನೆಯನ್ನು ತಮ್ಮ ದಾಸರಾದ ಪ್ರವಾದಿಗಳಿಗೆ ಮುಂತಿಳಿಸಿದ್ದ ಪ್ರಕಾರ ಈಡೇರಿಸುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”