Revelation 10:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಪರಲೋಕದಿಂದ ಮತ್ತೆ ಅದೇ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು ನನಗೆ, “ಹೋಗು, ದೇವದೂತನ ಕೈಯಲ್ಲಿರುವ ಬಿಚ್ಚಿದ ಸುರುಳಿಯನ್ನು ತೆಗೆದುಕೊ. ಆ ದೇವದೂತನು ಸಮುದ್ರದ ಮೇಲೆ ಮತ್ತು ಭೂಮಿಯ ಮೇಲೆ ನಿಂತಿದ್ದಾನೆ” ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.
Kannada BSI Bible 2016
ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತಾಡಿ - ನೀನು ಹೋಗಿ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೋ ಎಂದು ಹೇಳಿತು.
Kannada Bible (KNCL) BSI 2016
ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪರಲೋಕದಿಂದ ನಾನು ಕೇಳಿದ್ದ ಧ್ವನಿಯು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿರುವ ದೇವದೂತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ಹೇಳಿತು.