Revelation 10:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾನು ಆ ದೇವದೂತನ ಬಳಿಗೆ ಹೋಗಿ, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಆ ದೇವದೂತನು ನನಗೆ, “ಸುರುಳಿಯನ್ನು ತೆಗೆದುಕೊಂಡು ಅದನ್ನು ತಿಂದುಬಿಡು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.
Kannada BSI Bible 2016
ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆ ದೂತನ ಬಳಿಗೆ ಹೋಗಿ - ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ - ನೀನು ಇದನ್ನು ತೆಗೆದುಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿದನು.
Kannada Bible (KNCL) BSI 2016
ನಾನು ಆ ದೇವದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆ. ಅವನು “ತೆಗೆದುಕೋ, ಇದನ್ನು ತಿನ್ನು. ಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ದೇವದೂತನ ಬಳಿ ಹೋಗಿ, ಅವನನ್ನು, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಅವನು ನನಗೆ, “ಇದನ್ನು ತೆಗೆದುಕೊಂಡು ತಿನ್ನು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು. ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು,” ಎಂದು ಹೇಳಿದನು.