Revelation 11:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.
Kannada BSI Bible 2016
ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ದಂಡದಂತಿದ್ದ ಒಂದು ಅಳತೇ ಕೋಲು ನನ್ನ ಕೈಗೆ ಕೊಡಲ್ಪಟ್ಟಿತು. ಮತ್ತು ಒಂದು ವಾಣಿ ಉಂಟಾಯಿತು; ಅದು ನನಗೆ ಹೇಳಿದ್ದೇನಂದರೆ - ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಲೆಕ್ಕಿಸು.
Kannada Bible (KNCL) BSI 2016
ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಂಡದಂತಿದ್ದ ಒಂದು ಅಳತೆ ಕೋಲು ನನಗೆ ಕೊಡಲಾಯಿತು. ನನಗೆ ಹೀಗೆ ಹೇಳಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡಿ, ಆಲಯದಲ್ಲಿ ಆರಾಧನೆ ಮಾಡುವವರನ್ನು ಎಣಿಸು.