Revelation 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
Kannada BSI Bible 2016
ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವರಿಗೆ - ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಆಕಾಶದ ಮಹಾವಾಣಿಯು ಹೇಳಿತು. ಅದನ್ನು ಅವರು ಕೇಳಿ ಮೇಘ ವಿಮಾನದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
Kannada Bible (KNCL) BSI 2016
ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.