Revelation 11:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
Kannada BSI Bible 2016
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.
Kannada Bible (KNCL) BSI 2016
ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು: “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”