Revelation 11:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹಿರಿಯರು ಹೀಗೆ ಹೇಳಿದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.
Kannada BSI Bible 2016
ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.
Kannada Bible (KNCL) BSI 2016
“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.