Revelation 11:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.
Kannada BSI Bible 2016
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು.
Kannada Bible (KNCL) BSI 2016
ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.