Revelation 11:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.
Kannada BSI Bible 2016
ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಕಲ ಪ್ರಜೆ ಕುಲ ಭಾಷೆ ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು; ಅವುಗಳನ್ನು ಸಮಾಧಿಯಲ್ಲಿ ಇಡಗೊಡಿಸುವದಿಲ್ಲ.
Kannada Bible (KNCL) BSI 2016
ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು.