Revelation 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.
Kannada BSI Bible 2016
ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು;
Kannada Bible (KNCL) BSI 2016
ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.