Revelation 12:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
Kannada BSI Bible 2016
ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
Kannada Bible (KNCL) BSI 2016
ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು: “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.