Revelation 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಘಟಸರ್ಪಕ್ಕೆ ತನ್ನನ್ನು ಭೂಮಿಗೆ ತಳ್ಳಿಬಿಟ್ಟಿರುವುದು ತಿಳಿಯಿತು. ಆದ್ದರಿಂದ ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.
Kannada BSI Bible 2016
ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂವಿುಗೆ ಬಿದ್ದಿರುವದನ್ನು ಕಂಡು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವದಕ್ಕೆ ಅಟ್ಟಿಸಿಕೊಂಡು ಹೋದನು.
Kannada Bible (KNCL) BSI 2016
ಘಟಸರ್ಪವು ತನ್ನನ್ನು ಭೂಮಿಗೆ ತಳ್ಳಲಾಗಿರುವುದನ್ನು ಅರಿತು, ಗಂಡುಮಗುವಿಗೆ ಜನ್ಮವಿತ್ತ ಆ ಮಹಿಳೆಯನ್ನು ಅಟ್ಟಿಸಿಕೊಂಡು ಓಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಘಟಸರ್ಪನು ತಾನು ಭೂಮಿಗೆ ತಳ್ಳಲಾಗಿರುವುದನ್ನು ಕಂಡಾಗ, ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.