Revelation 12:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,
Kannada BSI Bible 2016
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು
Kannada Bible (KNCL) BSI 2016
ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.