Revelation 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸರ್ಪದ ಬಾಲವು ಆಕಾಶದ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗವನ್ನು ಸೆಳೆದೆಳೆದು ಭೂಮಿಯ ಮೇಲೆ ಎಸೆಯಿತು. ಆ ಘಟಸರ್ಪವು ಪ್ರಸವ ವೇದನೆಪಡುತ್ತಿದ್ದ ಸ್ತ್ರೀಯ ಎದುರಿನಲ್ಲಿ ನಿಂತುಕೊಂಡಿತು. ಆ ಸ್ತ್ರೀಯು ಹೆರುವ ಮಗುವನ್ನು ನುಂಗಿಹಾಕಲು ಆ ಸರ್ಪವು ಕಾದುಕೊಂಡಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.
Kannada BSI Bible 2016
ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರಲ್ಲೊಂದು ಭಾಗವನ್ನು ಎಳೆದು ಭೂವಿುಗೆ ಹಾಕಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅಲ್ಲೇ ಕಾದುಕೊಂಡಿತ್ತು.
Kannada Bible (KNCL) BSI 2016
ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.