Revelation 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು ಅವನು ಎಲ್ಲಾ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವ ಒಂದು ಗಂಡು ಮಗುವನ್ನು ಹೆತ್ತಳು. ಅವಳ ಮಗುವನ್ನು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ತೆಗೆದುಕೊಂಡು ಹೋಗಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
Kannada BSI Bible 2016
ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ಫಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
Kannada Bible (KNCL) BSI 2016
ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು.