Revelation 12:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
Kannada BSI Bible 2016
ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,
Kannada Bible (KNCL) BSI 2016
ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದಲ್ಲಿ ಯುದ್ಧನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡಿದರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು.