Revelation 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.
Kannada BSI Bible 2016
ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು;
Kannada Bible (KNCL) BSI 2016
ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.