Revelation 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
Kannada BSI Bible 2016
ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಂದು ಮೃಗವು ಭೂವಿುಯೊಳಗಿಂದ ಬರುವದನ್ನು ಕಂಡೆನು. ಇದಕ್ಕೆ ಟಗರಿಗಿರುವಂತೆ ಎರಡು ಕೊಂಬುಗಳಿದ್ದವು; ಘಟಸರ್ಪದಂತೆ ಮಾತಾಡಿತು.
Kannada Bible (KNCL) BSI 2016
ಬಳಿಕ ನಾನು ಮತ್ತೊಂದು ಮೃಗವನ್ನು ಕಂಡೆ. ಅದು ಭೂಮಿಯಿಂದ ಮೇಲೇರಿ ಬಂದಿತು. ಅದಕ್ಕೆ ಟಗರಿಗಿರುವಂಥ ಎರಡು ಕೊಂಬುಗಳು ಇದ್ದವು. ಆದರೆ ಅದು ಘಟಸರ್ಪದಂತೆಯೇ ಮಾತನಾಡುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.