Revelation 13:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
Kannada BSI Bible 2016
ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತಾಡುವದು; ತನಗೆ ನಮಸ್ಕರಿಸದವರೆಲ್ಲರಿಗೂ ಮರಣದಂಡನೆ ಆಗುವಂತೆ ಮಾಡುವದು.
Kannada Bible (KNCL) BSI 2016
ಆ ಮೃಗದ ವಿಗ್ರಹಕ್ಕೆ ಜೀವಶ್ವಾಸವನ್ನೂದಿ ಮಾತಾಡುವಂತೆಯೂ ಆ ವಿಗ್ರಹವನ್ನು ಆರಾಧಿಸದವರನ್ನು ಕೊಲ್ಲುವಂತೆಯೂ ಎರಡನೆಯ ಮೃಗಕ್ಕೆ ಅನುಮತಿಯನ್ನು ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.