Revelation 13:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡನೆಯ ಮೃಗವು ಸಹ ಎಲ್ಲರನ್ನು ಅಂದರೆ ಚಿಕ್ಕವರನ್ನು, ದೊಡ್ಡವರನ್ನು, ಶ್ರೀಮಂತ ರನ್ನು, ಬಡವರನ್ನು, ಗುಲಾಮರನ್ನು ಮತ್ತು ಸ್ವತಂತ್ರರನ್ನು, ತಮ್ಮ ಬಲಗೈಯ ಮೇಲಾಗಲಿ ಅಥವಾ ತಮ್ಮ ಹಣೆಗಳ ಮೇಲಾಗಲಿ ಗುರುತು ಹಾಕಿಕೊಳ್ಳಬೇಕೆಂದು ಒತ್ತಾಯಪಡಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
Kannada BSI Bible 2016
ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎರಡನೆಯ ಮೃಗವು - ದೊಡ್ಡವರು ಚಿಕ್ಕವರು ಐಶ್ಚರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂತಲೂ
Kannada Bible (KNCL) BSI 2016
ಹಿರಿಯ ಕಿರಿಯ, ಬಡವ ಬಲ್ಲಿದ, ದಾಸ ದಣಿ ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತಿನ ಹಚ್ಚೆ ಚುಚ್ಚಿಸಿಕೊಳ್ಳಬೇಕೆಂದು ಆ ಎರಡನೆಯ ಮೃಗ ಆಜ್ಞಾಪಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಚಿಕ್ಕವರು, ದೊಡ್ಡವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ಗುಲಾಮರು, ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂದೂ