Revelation 13:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಗುರುತಿಲ್ಲದೆ ಯಾರೂ ಕೊಳ್ಳುವಂತಿಲ್ಲ ಮತ್ತು ಮಾರುವಂತಿಲ್ಲ. ಈ ಗುರುತು ಏನೆಂದರೆ ಆ ಮೃಗದ ಹೆಸರು ಅಥವಾ ಅದರ ಹೆಸರಿನ ಸಂಖ್ಯೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.
Kannada BSI Bible 2016
ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡಿಸಕೂಡದೆಂತಲೂ ಆಜ್ಞೆಮಾಡುತ್ತದೆ. ಆ ಗುರುತು ಯಾವದಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಅಂಕೆ.
Kannada Bible (KNCL) BSI 2016
ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು.