Revelation 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಿಳುವಳಿಕೆಯುಳ್ಳ ಮನುಷ್ಯನು ಮೃಗದ ಸಂಖ್ಯೆಯ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ. ಇಲ್ಲಿ ಜ್ಞಾನದ ಅಗತ್ಯವಿದೆ. ಈ ಸಂಖ್ಯೆಯು ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆ 666.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.
Kannada BSI Bible 2016
ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಲ್ಲಿ ಜ್ಞಾನವು ಅಡಕವಾಗಿದೆ. ಬುದ್ಧಿವಂತನು ಆ ಮೃಗದ ಅಂಕೆಯನ್ನು ಎಣಿಸಲಿ; ಅದು ಒಬ್ಬ ಮನುಷ್ಯನನ್ನು ಸೂಚಿಸುವ ಅಂಕೆಯಾಗಿದೆ; ಅದರ ಅಂಕೆಯು ಆರುನೂರ ಅರುವತ್ತಾರು.
Kannada Bible (KNCL) BSI 2016
ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666.