Revelation 13:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.
Kannada BSI Bible 2016
ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ನಮಸ್ಕಾರ ಮಾಡುವವರಾದರು. ಇದಲ್ಲದೆ ಆ ಮೃಗಕ್ಕೂ ನಮಸ್ಕಾರ ಮಾಡಿ - ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧಮಾಡುವದಕ್ಕೆ ಯಾರು ಶಕ್ತರು? ಅಂದರು.
Kannada Bible (KNCL) BSI 2016
ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು.