Revelation 13:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
Kannada BSI Bible 2016
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ಮತ್ತು ನಾಲ್ವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
Kannada Bible (KNCL) BSI 2016
ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು.