Revelation 13:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
Kannada BSI Bible 2016
ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವಜನರ ಮೇಲೆ ಯುದ್ಧಮಾಡಿ ಅವರನ್ನು ಜಯಿಸುವದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು. ಮತ್ತು ಸಕಲ ಕುಲ ಪ್ರಜೆ ಭಾಷೆ ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
Kannada Bible (KNCL) BSI 2016
ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.