Revelation 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
Kannada BSI Bible 2016
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.
Kannada Bible (KNCL) BSI 2016
ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.