Revelation 14:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.
Kannada BSI Bible 2016
ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.
Kannada Bible (KNCL) BSI 2016
ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು.