Revelation 14:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
Kannada BSI Bible 2016
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.
Kannada Bible (KNCL) BSI 2016
ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.