Revelation 14:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
Kannada BSI Bible 2016
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.
Kannada Bible (KNCL) BSI 2016
ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.