Revelation 14:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮತ್ತೊಬ್ಬ ದೇವದೂತನು ಆಲಯ ದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
Kannada BSI Bible 2016
ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೂತನಾದ ಮತ್ತೊಬ್ಬನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ - ಭೂವಿುಯ ಪೈರು ಮಾಗಿ ಒಣಗಿದೆ; ಕೊಯ್ಯುವ ಕಾಲ ಬಂತು; ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ ಎಂದು ಮಹಾ ಶಬ್ದದಿಂದ ಕೂಗಿದನು.
Kannada Bible (KNCL) BSI 2016
ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.