Revelation 14:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
Kannada BSI Bible 2016
ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲಿನವನಿಗೆ - ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂವಿುಯ ದ್ರಾಕ್ಷೇಗೊಂಚಲುಗಳನ್ನು ಕೊಯ್ಯಿ; ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿದನು.
Kannada Bible (KNCL) BSI 2016
ಬೆಂಕಿಯ ಮೇಲೆ ಅಧಿಕಾರ ಪಡೆದಿದ್ದ ಒಬ್ಬ ದೇವದೂತನು, ಆಗ ಬಲಿಪೀಠದ ಬಳಿಯಿಂದ ಬಂದನು. ಈತ ಕೈಯಲ್ಲಿ ಹರಿತವಾದ ಕುಡುಗೋಲನ್ನು ಹಿಡಿದಿದ್ದ ದೇವದೂತನನ್ನು ಉದ್ದೇಶಿಸಿ, “ನಿನ್ನ ಹರಿತವಾದ ಕುಡುಗೋಲನ್ನು ಕಳುಹಿಸು, ಭೂಮಿಯ ದ್ರಾಕ್ಷಾಫಲಗಳು ಪೂರ್ಣವಾಗಿ ಮಾಗಿವೆ; ಆ ಗೊಂಚಲುಗಳನ್ನು ಕೊಯ್ಯಬೇಕಾಗಿದೆ,” ಎಂದು ಕೂಗಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.