Revelation 14:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ, ದ್ರಾಕ್ಷಿಯನ್ನೆಲ್ಲಾ ಒಟ್ಟುಗೂಡಿಸಿ, ದೇವರ ಕೋಪವೆಂಬ ದ್ರಾಕ್ಷಿಯ ಆಲೆಗೆ ಎಸೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.
Kannada BSI Bible 2016
ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ದೂತನು ತನ್ನ ಕುಡುಗೋಲನ್ನು ಭೂವಿುಗೆ ಹಾಕಿ ಭೂವಿುಯ ದ್ರಾಕ್ಷೇಬಳ್ಳಿಯ ಹಣ್ಣನ್ನು ಕೊಯಿದು ದೇವರ ರೌದ್ರವೆಂಬ ದೊಡ್ಡ ತೊಟ್ಟಿಯಲ್ಲಿ ಹಾಕಿದನು.
Kannada Bible (KNCL) BSI 2016
ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದನು; ಅವುಗಳನ್ನು ದೇವರ ರೋಷವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಎಸೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ, ಭೂಮಿಯ ದ್ರಾಕ್ಷಿಹಣ್ಣನ್ನು ಕೂಡಿಸಿ, ದೇವರ ಕೋಪವೆಂಬ ದೊಡ್ಡ ದ್ರಾಕ್ಷಿಯ ತೊಟ್ಟಿಯಲ್ಲಿ ಹಾಕಿದನು.